ಯಡಿಯೂರಪ್ಪನಂತ ನೂರು ಜನ ಬಂದರು ಬಿಜೆಪಿ ಗೆಲ್ಲುವಿದಿಲ್ಲ; ಸಿದ್ದರಾಮಯ್ಯ
ಬೆಂಗಳೂರು ,ಸೆ,21: ಬೆಲೆ ಏರಿಕೆಯಿಂದ ಜನರ ಆಕ್ರೋಶ ಒಳಗೊಳಗೆ ಕುದಿಯುತ್ತಿದೆ. ಈ ಸರ್ಕಾರ ತೊಲಗಿದರೆ ಸಾಕು, ಮತ್ತೆ ಚುನಾವಣೆ ಬಂದರೆ ಸಾಕು ಎಂದು ಕಾಯುತ್ತಿದ್ದಾರೆ. ಒಬ್ಬ ಯಡಿಯೂರಪ್ಪ ಅಲ್ಲ, ಯಡಿಯೂರಪ್ಪ ಅವರಂತಹ ನೂರು ಜನ ಬಂದರೂ ಬಿಜೆಪಿಯನ್ನು ಉಳಿಸಲಿಕ್ಕೆ ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸರ್ಕಾರ ಕೇಸ್ ಹಾಕುತ್ತದೆ ಎಂಬ ಕಾರಣಕ್ಕೆ ಇದನ್ನೆಲ್ಲ ಸಹಿಸಿಕೊಂಡು ಜನ ಸುಮ್ಮನಿದ್ದಾರೆ. ನರೇಂದ್ರ ಮೋದಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಯಾರಿಂದಲೂ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು…