Girl in a jacket

Daily Archives: September 22, 2021

ಮಲೆಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು,ಸೆ,22: ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹಾದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮಲೆ ಮಹಾದೇಶ್ವರ ದಕ್ಷಿಣ ಕರ್ನಾಟಕದ ಪ್ರಸಿದ್ಧ ಕ್ಷೇತ್ರ, ಹಳೆ ಮೈಸೂರು ಭಾಗದ ಜನರು ಹೆಚ್ಚಾಗಿ ನಡೆದುಕೊಳ್ಳುವ ದೇವಸ್ಥಾನ. ಈ ಕ್ಷೇತ್ರದ ಅಭಿವೃದ್ಧಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ…

ಚಾಣಕ್ಯ ವಿ.ವಿ.ಸ್ಥಾಪನೆಗೆ ನೀಡಿರುವ ಭೂಮಿ ವಾಪಾಸ್ ಪಡೆಯಲು ಸಿದ್ದು ಆಗ್ರಹ

ಬೆಂಗಳೂರು,ಸೆ,22 : ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸೆಂಡರ್ ಫಾರ್ ಎಜ್ಯುಕೇಷನ್ ಅಂಡ್ ಸೋಷಿಯಲ್ ಸ್ಟಡೀಸ್ ಸಂಸ್ಥೆಗೆ (ಸೆಸ್) ಕಡಿಮೆ ದರದಲ್ಲಿ ನೂರಾರು ಎಕರೆ ಭೂಮಿ ನೀಡುವ ತೀರ್ಮಾನವನ್ನು ಕೈ ಬಿಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೂರಾರು ಕೋಟಿ ರೂ. ಮೌಲ್ಯದ ಭೂಮಿಯನ್ನು ಕಡಿಮೆ ಬೆಲೆಗೆ ಪರಭಾರೆ ಮಾಡುವ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಇದರ ವಿರುದ್ಧ…

ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ:ಸಿಎಂ ಸೂಚನೆ

ಬೆಂಗಳೂರು, ಸೆ. 22:ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್ ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ…

ಸ್ಥಗಿತಗೊಂಡ ಯೋಜನೆಗಳು ಶೀಘ್ರ ಪುನರಾರಂಭ-ಬೊಮ್ಮಾಯಿ

ಬೆಂಗಳೂರು,ಸೆ,೨೨: ಕೋವಿಡ್ ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿರುವ ಅನುಮೋದನೆ ಪಡೆದ ಯೋಜನೆಗಳನ್ನು ಆರಂಭಿಸಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿಯಮ ೬೯ ರಡಿ ಜೆಡಿಎಸ್‌ನ ಎಚ್.ಡಿ.ರೇವಣ್ಣ ಮತ್ತು ಇತರ ಸದಸ್ಯರ ಪ್ರಸ್ತಾವಕ್ಕೆ ಉತ್ತರ ನೀಡಿದ ಅವರು, ಯಾವುದೇ ಕಾಮಗಾರಿಗಳನ್ನು ತಡೆ ಹಿಡಿದಿಲ್ಲ. ಪ್ರವಾಹ, ಕೋವಿಡ್ ಸಂಕಷ್ಟದಿಂದಾಗಿ ಕಾಮಗಾರಿಗಳು ಕುಂಠಿತ ಆಗಿದೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಹಣಕಾಸು ನಿರ್ವಹಣೆ ಅತಿ ಮುಖ್ಯ ಎಂದು ಹೇಳಿದರು. ಈಗಾಗಲೇ ಆಡಳಿತಾತ್ಮಕ ಒಪ್ಪಿಗೆ ಪಡೆದು…

  ಸಿದ್ಧಸೂಕ್ತಿ ;ಅಮೃತ.

                                                                                 ಸಿದ್ಧಸೂಕ್ತಿ-ಅಮೃತ. ಸಾಯದಿರುವುದು ಸಾವಿಲ್ಲದ್ದು ಸಾವನ್ನು ದೂರ ದೂಡುವುದು ಅಮೃತ. ಸಮುದ್ರ ಮಥನದಿಂದ ದೊರೆತುದು ಅಮೃತ, ಅದನ್ನು ಕುಡಿದ ದೇವತೆಗಳು ಅಮರರು. ಇದು ಪೌರಾಣಿಕ ಕಾಲ್ಪನಿಕ. ಕಠಿಣ ಪರಿಶ್ರಮದ ಆರಂಭದಲ್ಲಿ ಕಹಿ ಫಲ, ಮುಂದುವರೆದಲ್ಲಿ ಸಿಹಿ ಫಲ, ಅದರಿಂದ ತೃಪ್ತಿ! ಇದು ಸತ್ಯ ತತ್ತ್ವ! ಕುಡಿಯಲು ಬಾಯುಂಟು, ಕಡೆಯಲು ಕೈ ಕಾಲುಂಟು! ಹುಟ್ಟಿದ್ದು ತೋರಿದ್ದು ನಾಮ ರೂಪದ್ದು ಅಳಿಯಲೇಬೇಕು! ಅದ್ಹೇಗೆ ಅಮರರು? ದೀರ್ಘ ಬಾಳಿಕೆಯೇ ಅಮರತ್ವ! ಚಿರಕಾಲ ಹೆಸರುಳಿಸುವ ಸಾಧನೆಗೈದವರು ರಾಜ ಮಹಾರಾಜರು ಸಂತ ಮಹಾತ್ಮರು…

Girl in a jacket