ಅಕ್ಟೋಬರ್ 1 ರಿಂದ ಚಿತ್ರಮಂದಿರ ಶೇ. 100 ಭರ್ತಿಗೆ ಅವಕಾಶ:ಸಿಎಂ ಬೊಮ್ಮಾಯಿ
ಬೆಂಗಳೂರು, ಸೆ, 24:ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತಂತೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.. ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ 0.66 % ಇದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ…