ತಮ್ಮ ಹಕ್ಕುಗಳುಗೆ ಜಾತಿ ಸಮಾವೇಶ ನಡೆಸುವುದು ತಪ್ಪಲ್ಲ;ಸಿದ್ದು
ಬೆಂಗಳೂರು,ಸೆ,25 : ತಮ್ಮ ಹಕ್ಕುಗಳಿಗಾಗಿ ಹಿಂದುಳಿದ ವರ್ಗದವರು ಜಾತಿ ಸಮಾವೇಶಗಳನ್ನು ನಡೆಸುವುದು ಅಪರಾಧವಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕರ್ನಾಟಕ ರಾಜ್ಯ ಮಡಿವಾಳರ ಸಂಘ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಕರೋನದಿಂದ ಮೃತರಾದವರ ಕುಟುಂಬದವರಿಗೆ ಪರಿಹಾರ ಹಾಗೂ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದೆ. ನಾನು ಸಿಎಂ ಆಗಿದ್ದಾಗ ಈ ಸಮುದಾಯಕ್ಕೆ ಪ್ರತ್ಯೇಕ ಅನುದಾನ ನೀಡಿದ್ದೆ. ಹಿಂದುಳಿದವರು ಜಾತಿ ಹೆಸರಿನಲ್ಲಿ ಸಮ್ಮೇಳನ ಮಾಡಿದರೆ…