ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವವರಿಗೆ ಮುಂದಿನ ಚುನಾವಣೆಯಲ್ಲಿ ಉತ್ತರ; ಎಚ್ ಡಿಕೆ
ರಾಮನಗರ,ಸೆ,27: ಕೆಲವರು ಜೆಡಿಎಸ್ ಪಕ್ಷವನ್ನು 30 ಸೀಟುಗಳ ಪಕ್ಷ ಎಂದು ಲಘುವಾಗಿ ಮಾತನಾಡುತ್ತಿದ್ದಾರೆ. ಅಂಥವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು. ಬಿಡದಿಯ ತೋಟದ ಮನೆಯಲ್ಲಿ ಆಯೋಜಿಸಲಾಗಿದ್ದ ‘ಜನತಾ ಪರ್ವ 1.O’ ಹಾಗೂ, ‘ಮಿಷನ್ -123’ ಕಾರ್ಯಗಾರದಲ್ಲಿ ಪ್ರಚಲಿತ ರಾಜಕೀಯ ಸನ್ನಿವೇಶದ ಕುರಿತು ಮಾತನಾಡಿದರು ಅವರು. ಜೆಡಿಎಸ್ ಪಕ್ಷದಿಂದ ರಾಜಕೀಯವಾಗಿ ಬೆಳೆದವರು ಕೊನೆಗೆ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ಮುಗಿಸಲು…