ನಂದಿನಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆ ಮಾಡಿ;ಸಿಎಂ ಸಲಹೆ
ಬೆಂಗಳೂರು,ಸೆ,29:ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್‌ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಹಾಲಿನ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ದೊರೆತರೆ ಹೆಚ್ಚು ಹಾಲು ಉತ್ಪಾದನೆ ಆಗುತ್ತದೆ. ಮುಂದಿನ…