ಒಂದೇ ಕುಟುಂಬದ ಮೂವರು ಆತ್ಮಹತ್ಯೆ.
ಬೆಂಗಳೂರು,ಅ,02: ಇತ್ತೀಚೆಗಷ್ಟೇ ಒಂದೇ ಕುಟುಂಬದ ಐವರು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಘಟನೆ ಮರುಕಳಿಸಿದ್ದು,ಒಂದೇ ಕುಟುಂಬದ ಮೂವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ. ತಾಯಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ಬಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ವಸಂತಾ(40), ಯಶ್ವಂತ್(15), ನಿಶ್ಚಿತಾ(6) ಎಂದು ಗುರುತಿಸಲಾಗಿದೆ. ರೂಂ ಒಂದರಲ್ಲಿ ತಾಯಿ ಮಗಳು ಒಂದೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಮತ್ತೊಂದು ಕಡೆ ಮಗ…