Girl in a jacket

Daily Archives: October 6, 2021

ಜ್ಞಾನಪೀಠ ಪ್ರಶಸ್ತಿ ಯಾರಿಗೆ ಸಿಕ್ಕರೂ ಸಂತೋಷ;ಕಣವಿ

ಧಾರವಾಡ,ಅ,06: ಜ್ಞಾನಪೀಠ ಪ್ರಶಸ್ತಿ ಯಾರಿಗೆ ಸಿಕ್ಕರೂ ನನಗೆ ಸಂತೋಷ ಎಂದು ಹಿರಿಯ ಕವಿ ಚನ್ನವೀರ ಕಣವಿ ಹೇಳಿದ್ದಾರೆ. ಜ್ಞಾನಪೀಠ ಪ್ರಶಸ್ತಿಗೆ ಹೆಸರು ಶಿಫಾರಸ್ಸು ಮಾಡಿರುವ ವಿಚಾರವಾಗಿ ಧಾರವಾಡದಲ್ಲಿ ಹಿರಿಯ ಕವಿ ಚನ್ನವೀರ ಕಣವಿ ಮಾತನಾಡಿದ್ದು, ನನ್ನ ಹೆಸರು ಶಿಫಾರಸ್ಸು ಮಾಡಿದ್ದಕ್ಕೆ ನನಗೆ ಪ್ರಶಸ್ತಿ ಸಿಗುತ್ತೆ ಅಂತಾ ಅಲ್ಲ ಎಂದಿದ್ದಾರೆ. ಹೆಸರು ಶಿಫಾರಸ್ಸು ಮಾಡಿರುತ್ತಾರೆ. ಯಾರಿಗಾದರೂ ಒಬ್ಬರಿಗೆ ಪ್ರಶಸ್ತಿ ಕೊಡುತ್ತಾರೆ. ಶಿಫಾರಸ್ಸು ಮಾಡಿದ್ದಕ್ಕೆ ಪ್ರಶಸ್ತಿ ಬರುತ್ತದೆ ಅಂತಾ ಅಲ್ಲಾ. ಇನ್ನು ಪ್ರಶಸ್ತಿ ನನಗೆ ಬಂದರೂ ಸಂತೋಷ ಹೇಳಬಹುದು, ವೀರಪ್ಪ…

ಬೃಹತ್ ಮಕ್ಕಳ ಮಾರಾಟ ಜಾಲ ಪತ್ತೆ

ಬೆಂಗಳೂರು,ಅ.06:  ಮುಂಬೈನಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ತಂದು ಬೆಂಗಳೂರಿನಲ್ಲಿ ಮಕ್ಕಳಿಲ್ಲದ ಪೋಷಕರಿಗೆ ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಮಕ್ಕಳ ಮಾರಾಟ ಜಾಲವನ್ನ ಪೋಲಸರು  ಭೇದಿಸಿದ್ದಾರೆ. ಮಕ್ಕಳ ಮಾರಾಟ ದಂಧೆಗೆ ಗರ್ಭಿಣಿ ಮಹಿಳೆಯರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊಡುವ ತಾಯಿ ಕಾರ್ಡ್ ನ್ನೇ ನಕಲು ಮಾಡಿ ದುರ್ಬಳಕೆ ಮಾಡಿಕೊಂಡಿರುವ ಆಘಾತಕಾರಿ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಚಾಮರಾಜಪೇಟೆಯ ಸಿರ್ಸಿ ವೃತ್ತದಲ್ಲಿರುವ ಹೆರಿಗೆ ಆಸ್ಪತ್ರೆಯಲ್ಲಿ ಕಳ್ಳತನವಾಗಿದ್ದ ಮಗುವಿನ ಜಾಡು ಹಿಡಿದು ತನಿಖೆ ನಡೆಸಿದ ಪೊಲಿಸ್ ಸಬ್‌ಇನ್‌ಸ್ಪೆಕ್ಟರ್ ಶ್ರೀನಿವಾಸ್ ಬಾಂಬೆಯಿಂದ…

ಕೇಂದ್ರ ಸರ್ವಾಧಿಕಾರಿ ಧೋರಣೆ ವಿರುದ್ಧ ಖರ್ಗೆ ಆಕ್ರೋಶ

ಬೆಂಗಳೂರು, ಅ.6- ಉತ್ತರ ಪ್ರದೇಶದ ಲಖಿಂಪುರ ಖೇರಿ ದುರ್ಘಟನೆಯಲ್ಲಿ ಆರು ಮಂದಿ ರೈತರು ಮೃತಪಟ್ಟಿದ್ದು, ಸಾಂತ್ವಾನ ಹೇಳಲು ಹೋದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಿಜೆಪಿ ಸರ್ಕಾರ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದು ಅವರನ್ನು ಕೀಡಲೇ ಬಿಡುಗಡೆ ಮಾಡುವಂಯೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ವಿರೋಧಿಯಾದ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಅವರಿಗೆ ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಶ್…

ಸರಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ; ಡಿ.ಕೆ. ಶಿ ಆರೋಪ

ಬೆಂಗಳೂರು,ಅ,07:ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಇದು ಆರೆಸ್ಸಸ್ ನವರ ಕಾರ್ಯಾಚರಣೆ ಶೈಲಿ. ಇದನ್ನೇ ನಾವು ಕೇಸರಿಕರಣ ಎಂದು ಹೇಳುತ್ತಿದ್ದೇವೆ. ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆಯಲ್ಲಿ ಆಪಾದಿಸಿದರು. ಈ…

ಆರ್ ಎಸ್ ಎಸ್ ಗೆ ಬಂದು ಸಂಶೋಧನೆ ಮಾಡಿ ಎಂದ ಸಿ.ಟಿ.ರವಿಗೆ ತಿರುಗೇಟು ನೀಡಿದ ಹೆಚ್ಡಿಕೆ

ಬೆಂಗಳೂರು,ಅ,06: ಆರ್ ಎಸ್ ಎಸ್ ಬಗ್ಗೆ ತಾವು ನೀಡಿದ ಹೇಳಿಕೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಸಂಘದ ಶಾಖೆಗೆ ಬಂದು ಅಧ್ಯಯನ ಮಾಡಿ ಎಂದು ಹೇಳಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಿ.ಟಿ.ರವಿ ಅವರು ನೀಡಿರುವ ಪ್ರತಿ ಹೇಳಿಕೆಗೂ ಟಾಂಗ್ ಕೊಟ್ಟಿದ್ದು, ಅವರ ಟ್ವೀಟ್ʼನ ವಿವರ ಹೀಗಿದೆ; ಸಿ.ಟಿ ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ…

ಮತ್ತೆ ಅಡುಗೆ ಅನಿಲ ಬೆಲೆ‌ಏರಿಕೆ

ನವದೆಹಲಿ,ಅ,06: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ದೇಶಾದ್ಯಂತ ಇಂದಿನಿಂದಲೇ ಹೊಸ ದರಗಳು ಜಾರಿಯಾಗಲಿವೆ ಎಂದು ಹೇಳಲಾಗಿದೆ.ಪೆಟ್ರೋಲಿಯಂ ಕಂಪನಿಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 15 ರೂ. ಹೆಚ್ಚಳ ಮಾಡಿದ್ದು, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ಈಗ…

ಮಂತ್ರ

‌                  ಸಿದ್ಧಸೂಕ್ತಿ :               ‌‌                   ಮಂತ್ರ. ಮತ್ತೆ ಮತ್ತೆ ಮನನದಿಂದ ಕಾಪಾಡುವುದು ಮಂತ್ರ. ಲಿಂಗಾಯತರ ಅಷ್ಟಾವರಣಗಳಲ್ಲಿ ಒಂದು. ತಪೋನಿಷ್ಠ ಮುನಿಗಳ ಹೃದಯಾಂತರಾಳ ಮುಖಕಮಲದಿಂದ ಹೊರಹೊಮ್ಮಿದ್ದು. ಶ್ಲೋಕ, ಬೋಧಪ್ರದ ಗುರೂಪದೇಶವೂ ಮಂತ್ರ. ಋಗ್ ಯಜುಃ ಸಾಮ ಅಥರ್ವ ವೇದವೆಲ್ಲ ಮಂತ್ರರೂಪ! ಗಾಯತ್ರಿ ಪಂಚಾಕ್ಷರಿ ಷಡಕ್ಷರಿ ತ್ರಯೋದಶಾಕ್ಷರಿ…

ಅಖೀಂಪುರ್ ಘಟನೆ;ಅಶೀಶ್ ಮಿಶ್ರ ರೈತರನ್ನು ಕೆಣಕಿ ಗುಂಡು ಹಾರಿಸಿದ್ದಾರೆ,ಎಫ್ ಐಆರ್ ನಲ್ಲಿ ಉಲ್ಲೇಖ

ಲಖೀಂಪುರ್ ಖೇರ್,ಅ,06: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ. ಬಹ್ರೈಚ್ ಜಿಲ್ಲೆಯವರಾದ ಜಗಜಿತ್ ಸಿಂಗ್ ಅವರ ದೂರಿನ ಮೇಲೆ ದಾಖಲಾದ ಮೊದಲ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ಈ ಎಪಿಸೋಡ್ ಪೂರ್ವ ಯೋಜಿತವಾಗಿದ್ದು, ಮಂತ್ರಿ ಹಾಗೂ ಆತನ ಪುತ್ರನಿಂದ ಪಿತೂರಿ ನಡೆದಿದೆ ಎಂದು ಹೇಳಲಾಗಿದೆ.…

ದಸರಾ;ಮಾರ್ಗಸೂಚಿ ಬಿಡುಗಡೆ,ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ

ಬೆಂಗಳೂರು,ಅ,06; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ…

Girl in a jacket