ಪರಿಶಿಷ್ಟ ಜಾತಿ ಪಂಗಡಗಳ ಸರ್ವತೋಮುಖ ಅಭಿವೃದ್ಧಿಗೆ ಬದ್ಧ; ಶ್ರೀರಾಮುಲು
ಯಾದಗಿರಿ.ಅ.9: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾಮಾಜಿಕ , ಆರ್ಥಿಕ, ಶೈಕ್ಷಣಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು ಅವರು ತಿಳಿಸಿದರು. ಯಾದಗಿರಿಯಲ್ಲಿಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಮತ್ತು ಚೆಕ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ದವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ…