ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ:ಸಿಎಂ
ಬೆಂಗಳೂರು, ಅ,12: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿದ್ಯುತ್ ಉತ್ಪಾದನೆ, ಬೇಡಿಕೆ ಮತ್ತು ಕಲ್ಲಿದ್ದಲು ಪರಿಸ್ಥಿತಿ ಕುರಿತಂತೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರನ್ನು ದೆಹಲಿಯಲ್ಲಿ ಭೇಟಿಯಾದ ನಂತರ 2 ರೇಕುಗಳು ಹೆಚ್ಚುವರಿಯಾಗಿ ಬರುತ್ತಿವೆ.10 ರೇಕುಗಳು ಪ್ರತಿನಿತ್ಯ ಪೂರೈಕೆಯಾಗುತ್ತಿದ್ದು, 98863 ಮೆಟ್ರಿಕ್ ಟನ್ ದಾಸ್ತಾನು ಇದೆ ಎಂದರು. ಸಿಂಗರೇಣಿ ಗಣಿಗಳಿಂದ ನಮಗೆ ಎರಡು ರೇಕುಗಳು ದೊರಕಲಿದ್ದು,…