ಎಫ್.ಆರ್.ಎಲ್. ಉಪವಿಭಾಗ-೨ನ್ನು ಸ್ಥಳಾಂತರಗೊಳಿಸುವ ಆದೇಶ ರದ್ದತಿಗೆ ಒತ್ತಾಯ
ಆಲಮಟ್ಟಿ,ಅ,:13: ಇಲ್ಲಿನ ಕೃಷ್ಣಾಮೇಲ್ದಂಡೆ ಯೋಜನೆ ವ್ಯಾಪ್ತಿಯ ಎಫ್.ಆರ್.ಎಲ್. ಉಪವಿಭಾಗ-೨ನ್ನು ಬೀಳಗಿಗೆ ಸ್ಥಳಾಂತರಗೊಳಿಸುವ ಆದೇಶವನ್ನು ರದ್ದುಗೊಳಿಸಿ ಇಲ್ಲಿಯೇ ಮುಂದುವರೆಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಮತ್ತು ಕರ್ನಾಟಕ ರಕ್ಷಣಾವೇದಿಕೆ ಘಟಕದವತಿಯಿಂದ ಬುಧವಾರ ಪ್ರತ್ಯೇಕವಾಗಿ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು. ಬುಧವಾರ ಇಲ್ಲಿನ ಕೆಬಿಜೆನ್ನೆಲ್ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ತಿರುಪತಿ ಬಂಡಿ ಅವರು ಕೃ.ಮೇ.ಯೋಜನೆ ವ್ಯಾಪ್ತಿಯ ಆಲಮಟ್ಟಿ…