ಎಚ್ ಡಿಕೆ ಹಿಟ್ ಅಂಡ್ ಗಿರಾಕಿ: ಸಿದ್ದು ಲೇವಡಿ
ಹುಬ್ಬಳ್ಳಿ, ಅ,17:ಕುಮಾರಸ್ವಾಮಿ ಹಿಟ್ ಎಂಡ್ ರನ್ ಕೇಸ್ ಗಿರಾಕಿ. ಅವರು ಯಾವಾಗಲೂ ಬರೀ ಸುಳ್ಳೇ ಹೇಳೋದು ಹಾಗಾಗಿ ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ನಿರ್ಧಾರ ಮಾಡಿದ್ದೇನೆ. ನಾನು ಅಲ್ಪಸಂಖ್ಯಾತರಿಗೆ ಮೋಸ ಮಾಡಿದ್ದೀನಾ ಬಿಟ್ಟಿದೀನಾ ಎಂದು ನಮ್ಮ ಪಕ್ಷದ ಅಲ್ಪಸಂಖ್ಯಾತ ನಾಯಕರು ಹೇಳ್ತಾರೆ, ನಾನು ಈ ಬಗ್ಗೆ ಮಾತನಾಡಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಕಚೇರಿಯಿಂದ ಎಲ್ಲರಿಗೂ ಪ್ರಚಾರಕ್ಕೆ ಬರುವಂತೆ ಪತ್ರ ಕಳಿಸಿದ್ದಾರೆ, ಸಿ.ಎಂ ಇಬ್ರಾಹಿಂ ಅವರಿಗೆ ಚುನಾವಣಾ ಪ್ರಚಾರಕ್ಕೆ ಬರಬೇಡಿ ಎಂದು ಯಾರೂ…