ಜಿಲ್ಲೆಗೊಂದು `ಮಾದರಿ ಎಂಜಿನಿಯರಿಂಗ್ ಕಾಲೇಜು’
ಬೆಂಗಳೂರು,ಅ,22: ರಾಜ್ಯದ ಪ್ರತೀ ಜಿಲ್ಲೆಯಲ್ಲೂ ತಲಾ ಒಂದು ಮಾದರಿ ಎಂಜಿನಿಯರಿಂಗ್ ಕಾಲೇಜ ಅನ್ನು ಉತ್ಕೃಷ್ಟ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಸಂಬಂಧವಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. `ಸೂಪರ್-30 ಎಂಜಿನಿಯರಿಂಗ್ ಕಾಲೇಜು’ ಎನ್ನುವ ಈ ವಿಶಿಷ್ಟ ಪರಿಕಲ್ಪನೆಯ ಯೋಜನೆಗೆ, ಈಗಾಗಲೇ ಅಸ್ತಿತ್ವದಲ್ಲಿದ್ದು ಶೈಕ್ಷಣಿಕವಾಗಿ…