Girl in a jacket

Daily Archives: October 24, 2021

ಬ್ಯಾಟಿಂಗ್, ಬೌಲಿಂಗ್ ನಲ್ಲಿ ಟೀಂ ಇಂಡಿಯಾ ಫೇಲ್, ಪಾಕ್ ಗೆ ಭರ್ಜರಿ ಗೆಲುವು

Reported By H.D Savita ದುಬೈ :ಐಸಿಸಿ ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತವು ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೋಲು ಅನುಭವಿಸಿದೆ. ಪಾಕ್  ನಾಯಕ ಬಾಬರ್ ಅಜಮ್ ಹಾಗೂ ಮೊಹಮ್ಮದ್ ರಿಜ್ವಾನ್ ಅಬ್ಬರದ ಬ್ಯಾಟಿಂಗ್‌ನಿಂದ ಪಾಕಿಸ್ತಾನ 10 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ICC ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಅಜೇಯ ಗೆಲುವಿನ ಓಟದ ದಾಖಲೆಗಳನ್ನು ಪಾಕಿಸ್ತಾನ ಮುರಿದಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಫಲಗೊಂಡಿತು.…

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿಂದಗಿ,( ಕೋಕಟನೂರು),ಅ,24:ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಭಾನುವಾರ ಸಿಂದಗಿ ಮತಕ್ಷೇತ್ರದ ಕೊಕಟನೂರು ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉಣ್ಣೆ ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ. ದಾಸಶ್ರೇಷ್ಠರಾದ ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆಯನ್ನು…

ಸೂಟಕೇಸ್ ತಗೊಂಡು ಕುಮಾರಸ್ವಾಮಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ ಜಮೀರ್ ಆರೋಪ

ವಿಜಯಪುರ,ಅ,24: ಕುಮಾರಸ್ವಾಮಿ ಅವರು ಎರಡು ಕ್ಷೇತ್ರದ ಚುನಾವಣೆಯ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಂದ ಸೂಟ್ ಕೇಸ್ ಪಡೆದು ಟಿಕೆಟ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಜಮೀರ್ ಅಹ್ಮದ್ ಖಾನ್, ಹೆಚ್.ಡಿ ಕುಮಾರಸ್ವಾಮಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಬಿಜೆಪಿಯಿಂದ ಸೂಟ್ ಕೇಸ್ ಪಡೆದು ಅಭ್ಯರ್ಥಿ ಹಾಕಿದ್ದಾರೆ. ಬಸವಕಲ್ಯಾಣದಲ್ಲಿ 10 ಕೋಟಿ ತೆಗೆದುಕೊಂಡು ಅಭ್ಯರ್ಥಿ ಹಾಕಿದ್ರು. ಸಿಂದಗಿಯಲ್ಲಿ ಬಿಜೆಪಿ ಗೆಲ್ಲಲು ಸಹಾಯ ಮಾಡುತ್ತಿದ್ದಾರೆ…

ನಾಳೆಯಿಂದ 1ರಿಂದ 5 ರವರೆಗೆ ಶಾಲೆಗಳು ಆರಂಭ

ಬೆಂಗಳೂರು,ಅ,24:1ರಿಂದ 5 ನೇ ತರಗತಿಗಳು ನಾಳೆಯಿಂದ ರಾಜ್ಯಾದ್ಯಂತ ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದರಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು,ಅದರಂತೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ. ಮಕ್ಕಳಿಗೆ ಶಾಲೆ ಹಾಜರಾತಿ ಕಡ್ಡಾಯವಿಲ್ಲ ಎಂದು ‌ ಸ್ಪಷ್ಟಪಡಿಸಲಾಗಿದೆ.ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ 2…

ಎಲ್ಲೆಲ್ಲೂ ಗ್ಯಾಸ್ ತಿಪ್ಪೇರುದ್ರಪ್ಪಮೇಷ್ಟು ಮತ್ತು ಅವರ ಮಾತು

ಎಲ್ಲೆಲ್ಲೂ ಗ್ಯಾಸ್ ತಿಪ್ಪೇರುದ್ರಪ್ಪಮೇಷ್ಟು ಮತ್ತು ಅವರ ಮಾತು “ಡಾಕ್ಟ್ರೇ, ಈ ಜನ ಬಾಯಿ ಕಟ್ಟುವುದಿಲ್ಲ ಸಿಕ್ಕಸಿಕ್ಕಿದ್ದು ತಿಂದು, ಔಷಧಿಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದೆ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಂಡು ಪರಿಸ್ಥಿತಿ ತೀರಾ ಬಿಗಡಾಯಿಸಿದಾಗ ಮಾತ್ರ ಆಸ್ಪತ್ರೆಗೆ ಓಡಿ ಬರುತ್ತಾರೆ. ಇಂತಹವರಿಗೆ ಎಂತಹ ಚಿಕಿತ್ಸೆ ಮಾಡಿದರೂ ಪ್ರಯೋಜನವಿಲ್ಲ” ಎಂದು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾಕ್ಟರ್ ಶಿವಶಂಕರ ಮೋಟೆಬೆನ್ನೂರ ಅವರ ಟೇಬಲ್ ಎದುರಿಗಿದ್ದ ಮರದ ಕುರ್ಚಿಯೊಂದರಲ್ಲಿ ಪೂರ್ತಿ ಹಿಂದಕ್ಕೆ ಒರಗಿದಂತೆ ಕುಳಿತು ಕಾಲುಗಳನ್ನು ನೀಳವಾಗಿ ಚಾಚಿ, ಮೂಗಿನ ತುದಿಗೆ…

ಶರೀರಮಾಧ್ಯಂ ಖಲು ಧರ್ಮಸಾಧನಂ

‌‌‌‌‌                     ಸಿದ್ಧಸೂಕ್ತಿ: ಶರೀರಮಾಧ್ಯಂ ಖಲು ಧರ್ಮಸಾಧನಂ. ಶಿವನನ್ನು ಒಲಿಸಿಕೊಳ್ಳಲು ಪರ್ವತರಾಜಕುಮಾರೀ ಪಾರ್ವತೀ ಕಠಿಣ ತಪೋಮಗ್ನಳಾಗಿ ಶರೀರವನ್ನು ದಂಡಿಸಿದ್ದನ್ನು ಕಂಡ ಶಿವನ ಮಾರುವೇಷದ ಬ್ರಹ್ಮಚಾರಿಯು ಪಾರ್ವತಿಗೆ ಹೇಳಿದ ಮಾತಿದು. ಶರೀರವು ಧರ್ಮಸಾಧನೆಗೆ ಮೂಲಾಧಾರ.ಅದನ್ನು ಚೆನ್ನಾಗಿ ಸಂರಕ್ಷಿಸಬೇಕು! ಶರೀರದಲ್ಲಿನ ಕಣ್ಣು ಕಿವಿ ಮೂಗು ಬಾಯಿ ಗುಪ್ತೇಂದ್ರಿಯ ಕೈ ಕಾಲು ಅವುಗಳ ಬೆರಳುಗಳನ್ನು,ಜೀವ ಮೆದುಳು ಹೃದಯ ಶ್ವಾಸಕೋಶ ಅನ್ನನಾಳ ಯಕೃತ್ ದೊಡ್ಡಕರುಳು ಸಣ್ಣಕರುಳು ಮೂತ್ರಕೋಶ ನರಮಂಡಲಗಳನ್ನು ಗಮನಿಸಿ. ಎಂಥ…

Girl in a jacket