ಪೇಜಾವರರ ಹೇಳಿಕೆ ಹಾಸ್ಯಾಸ್ಪದ :ಡಾ. ಆರೂಢಭಾರತೀ ಸ್ವಾಮೀಜಿ.
ಬೆಂಗಳೂರು,ಅ,26:ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಸರ್ಕಾರವು ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸುತ್ತಿದ್ದು, ಅರ್ಚಕವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಪ್ರಯತ್ನವಾಗಿದ್ದು, ಸರ್ಕಾರವು ಅರ್ಚಕ ಉದ್ಯೋಗವನ್ನು ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮೀಸಲಿಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಭಾನುವಾರ ಮೈಸೂರಿನ ವಿಪ್ರ ಸಮ್ಮೇಳನದಲ್ಲಿ ಹೇಳಿರುವುದಾಗಿ ವರದಿಯಾಗಿದ್ದು ಅವರ ಈ ಹೇಳಿಕೆ ಹಾಸ್ಯಾಸ್ಪದ ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ. ಇದು ಶ್ರೇಣೀಕೃತ ವರ್ಣ ವ್ಯವಸ್ಥೆಯನ್ನು ವಿಸ್ತರಿಸುವ, ಪುರೋಹಿತಶಾಹಿತನವನ್ನು ಪುನಃ ಪ್ರತಿಷ್ಠಾಪಿಸುವ ಹುನ್ನಾರ. ಈ ಮೂಲಕ ವೇದಾಧ್ಯಯನವನ್ನು…