ಕರ್ನಾಟಕದಲ್ಲಿ ಪ್ರತಿಯೊಬ್ಬರು ಕನ್ನಡಲ್ಲೇ ವ್ಯವಹರಿಸಬೇಕು-ಬಿ.ಸಿ.ನಾಗೇಶ್
ಬೆಂಗಳೂರು, ನ. ೦೧: ಪ್ರತಿಯೊಬ್ಬರು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡದಲ್ಲಿಯೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು ಹಾಗೂ ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವ ಮೂಲಕ ನಮ್ಮ ನಾಡು-ನುಡಿ, ಸಂಸ್ಕತಿ ಉಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೬೬ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ…