ಪತ್ರಕರ್ತರ ರಾಜ್ಯ ಸಮ್ಮೇಳನ: ಸಿಎಂರಿಂದ ಲಾಂಚನ ಬಿಡುಗಡೆ
ಬೆಂಗಳೂರು, ನ,08: ಇದೇ ನ. 27 ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಬಿಡುಗಡೆಗೊಳಿಸಿದರು. ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಅವರು, ಸಮ್ಮೇಳನದ ಯಶಸ್ವಿ ಗೆ ಸರ್ಕಾರದ ಸರ್ವ ನಿಟ್ಟಿನ ಬೆಂಬಲವಿದೆ ಎಂದರು. ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು…