ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಯತ್ನ: ಹೆಚ್.ಡಿ.ಕೆ ಆರೋಪ
ಬೆಂಗಳೂರು,ನ,10: ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ ಬಿರುಸಿನ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ‘ಜನತಾ ಪರ್ವ 1.O’ ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ಜನತಾ ಸಂಗಮ’ದ ಮೂರನೇ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಆ ಮೂಲಕ ಇಡೀ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿವೆ ಎಂದರು…