ಕನ್ನಡ ಸಾಹಿತ್ಯಕ್ಕೆ ಕೀರ್ತನೆಗಳು ನೀಡಿದ ಕನಕದಾಸರು
-ಜಿ ಕೆ ಹೆಬ್ಬಾರ್ ಶಿಕಾರಿಪುರ ಕನ್ನಡ ಸಾಗಿತ್ಯಕ್ಕೆ ಕೀರ್ತನೆಗಳು ನೀಡಿದ ಕನಕದಾಸರು ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ಕೊಟ್ಟವರು ಕನಕದಾಸರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. . ಕನ್ನಡ ಸಾಹಿತ್ಯಕ್ಕೆ ತಮ್ಮದೆ ಕೀರ್ತನೆಗಳ ಮೂಲಕ ಅನರ್ಘ್ಯ…