ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ನಡೆದ ಟೆಂಡರ್ ಗಳ ಬಗ್ಗೆಯೂ ತನಿಖೆಯಾಗಲಿ ;ಸಿದ್ದು
ಮೈಸೂರು,ನ27:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಯಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದರು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾಗಲಿ ಎಂದರು. ವಿಧಾನ ಪರಿಷತ್ತಿನ…