ರದಜ್ಯದಲ್ಲಿ ಲಾಕ್ ಡೌನ್ ಮಾಡುವ ಯಸವುದೇ ಪ್ರಸ್ತಾಪ ಇಲ್ಲ: ಸುಧಾಕರ್
ಬೆಂಗಳೂರು, ನ.29: ಓಮಿಕ್ರಾನ್ ರೂಪಾಂತರ ತಳಿ ಬಗ್ಗೆ ತೀವ್ರ ಆತಂಕ ಬೇಡ. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೆಲವರು ಲಾಕ್‌ಡೌನ್ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿದೆ. ಸಾರ್ವಜನಿಕರು ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು. ಲಾಕ್‌ಡೌನ್ ಮಾಡುವ ಅಗತ್ಯವೇ ಇಲ್ಲ. ಸರ್ಕಾರದ ಮುಂದೆ ಅಂತಹ ಪ್ರಸ್ತಾಪವೂ ಇಲ್ಲ ಎಂದು ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನು ಮೂರನೇ ಅಲೆ…