ಎನ್ಇಪಿ ಭಾರತ ಕೇಂದ್ರಿತ; ಸಂಶೋಧನೆ, ನಾವೀನ್ಯತೆಗೆ ಒತ್ತು;ಅಶ್ವತ್ಥ್ ನಾರಾಯಣ
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತ ಕೇಂದ್ರಿತವಾಗಿದ್ದು, ಶಿಕ್ಷಣ ಕ್ರಮದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡುವ ಮೂಲಕ ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಯನ್ನು ಗುರಿಯಾಗಿ ಹೊಂದಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಎಜುಕೇಷನ್ ಪ್ರೊಮೋಷನ್ ಸೊಸೈಟಿ ಆಫ್ ಇಂಡಿಯಾ (ಇಪಿಎಸ್ಐ), ಕುಪೇಕಾ ಮತ್ತು ಕಾಮೆಡ್-ಕೆ ಸಂಘಟನೆಗಳು ಜತೆಗೂಡಿ ಮಂಗಳವಾರ ಏರ್ಪಡಿಸಿದ್ದ `ಎನ್ಇಪಿ ಜಾರಿ: ಶಿಕ್ಷಣ ಸಂಸ್ಥೆಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು’ ವಿಚಾರ ಗೋಷ್ಠಿಯಲ್ಲಿ…