ಸಿದ್ದರಾಮಯ್ಯ ಅವರನ್ನು ಕೇಳಿ ಮೋದಿ ಅವರನ್ನು ಭೇಟಿಯಾಗಬೇಕಿತ್ತಾ ಸಿದ್ದು ವಿರುದ್ಧ ದೇವೇಗೌಡ ಕಿಡಿ
ಚಿಕ್ಕಬಳ್ಳಾಪುರ,ಡಿ,02: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರ ಅನುಮತಿ ಬೇಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಶ್ನಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಡ್ಲಘಟ್ಟದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಏಳೆಂಟು ಬಾರಿ ಭೇಟಿಯಾಗಿದ್ದೇನೆ. ಈ ಹಿಂದೆ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 10 ಬಾರಿ ಭೇಟಿಯಾಗಿದ್ದೆ. ಮೋದಿ ಅವರನ್ನು ಭೇಟಿಯಾದ ತಕ್ಷಣ ಜೆಡಿಎಸ್ ಅವರಿಗೆ ಒಪ್ಪಿಸಿದಂತೆ ಆಗುತ್ತದೆಯೇ? ಎಂಥ…