ಕಂಪನಿಗಳಿಗೆ ಸಾಮಾಜಿಕ ಒಳಗೊಳ್ಳುವಿಕೆ ದೃಷ್ಟಿಕೋನ ಮುಖ್ಯ: ಅಶ್ವತ್ಥನಾರಾಯಣ
ಬೆಂಗಳೂರು,ಡಿ,10: ಕೇವಲ ವಾಣಿಜ್ಯ ಲಾಭದ ದೃಷ್ಟಿಯಿಂದ ಕಂಪನಿಗಳನ್ನು ನಡೆಸುವುದರ ಬದಲು ಸಮಾಜದ ಪ್ರತಿಯೊಬ್ಬರನ್ನೂ ಒಳಗೊಳ್ಳುವಂತಹ ದೃಷ್ಟಿಕೋನವು ಉದ್ಯಮಗಳಲ್ಲಿ ಬೇರೂರಬೇಕಾಗಿದೆ. ಇದರಿಂದ ಮಾತ್ರ ಸಮಾಜವು ಪ್ರಗತಿ ಸಾಧಿಸಬಲ್ಲದು ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ನಡೆದ 12ನೇ ಸಿಎಸ್ಆರ್ ನಾಯಕತ್ವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿರುವ ಯೂನಿಕಾರ್ನ್ ಕಂಪನಿಗಳಲ್ಲಿ ಶೇ.60ರಷ್ಟು ರಾಜ್ಯದಲ್ಲೇ ಇದ್ದು, ಇವು ಈಗ ಸಾಮಾಜಿಕ ವಲಯಗಳತ್ತಲೂ ಗಮನ ಹರಿಸುತ್ತಿರುವುದು ಸ್ವಾಗತಾರ್ಹ…