ಅತಿಥಿ ಉಪನ್ಯಾಸಕರ ಬೇಡಿಕೆಗಳ ಅಧ್ಯಯನಕ್ಕೆ ಸಮಿತಿ ರಚನೆ
ಬೆಂಗಳೂರು,ಡಿ,13: ರಾಜ್ಯದಲ್ಲಿರುವ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಕುರಿತು ಅಧ್ಯಯನ ನಡೆಸಿ, ವಿಸ್ತೃತ ವರದಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಬಗ್ಗೆ ಸರಕಾರ ಸೋಮವಾರ ಆದೇಶ ಹೊರಡಿಸಿದ್ದು, ಇದರಲ್ಲಿ ಆರ್ಥಿಕ ಮತ್ತು ಕಾನೂನು ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಕೂಡ ಇರಲಿದ್ದಾರೆ. ಸಮಿತಿಯು ನಿಗದಿತ ಕಾಲಮಿತಿಯೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಜೊತೆಗೆ, ವಿಧಾನ ಪರಿಷತ್ ಸಭಾಪತಿ…