ಅತಿಥಿ ಉಪನ್ಯಾಸಕರ ಸಮಸ್ಯೆ: ತಿಂಗಳಲ್ಲಿ ಸಮಿತಿ ವರದಿ, ಬಳಿಕ ಪರಿಹಾರ
ಬೆಳಗಾವಿ,ಡಿ,14: ಸೇವಾಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ರಾಜ್ಯದ 14 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ ಕಲ್ಪಿಸುವ ಸಂಬಂಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೇರಿದಂತೆ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು ಕೂಡ ಭಾಗವಹಿಸಿದ್ದ ಈ ಸಭೆಯು, ಈ ಸಂಬಂಧ ರಚಿಸಲಾಗಿರುವ ಉನ್ನತ ಮಟ್ಟದ…