Girl in a jacket

Daily Archives: December 15, 2021

ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ:ಅಶ್ವತ್ಥನಾರಾಯಣ

ಬೆಳಗಾವಿ,ಡಿ,14: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ `ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆ ನೆರವೇರಿಸಿ ಅವರು…

ಸಭಾಪತಿ ಆದೇಶ ಉಲ್ಲಂಘನೆ;೧೪ ಮಂದಿ ಕಾಂಗ್ರಸ್ ಸದಸ್ಯರ ಅಮಾನತು

ಬೆಳಗಾವಿ,ಡಿ,14: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ಅದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಒಂದು ದಿನದ ಮಟ್ಟಿಗೆ ಅಮಾನತು ಮಾಡಿದ್ದಾರೆ. ಸಿಎಂ ಇಬ್ರಾಹಿಂ, ಪಿಆರ್ ರಮೇಶ್, ಪ್ರತಾಪ್ ಚಂದ್ರ ಶೆಟ್ಟಿ, ಎಸ್ ಆರ್ ಪಾಟೀಲ್, ಪಿಆರ್ ರಮೇಶ್, ನಾರಾಯಣ ಸ್ವಾಮಿ, ಬಿಕೆ ಹರಿಪ್ರಸಾದ್, ಯಬಿ ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿ 14 ಮಂದಿಯನ್ನು ಅಮಾನತು…

ಮತಾಂತರ ನಿಷೇಧ ಕಾಯ್ದೆ ವಿರೋಧಿಸಲು ತೀರ್ಮಾನ

ಬೆಳಗಾವಿ, ಡಿ.15: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೂ ಪೂರ್ವಭಾವಿಯಾಗಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿತು. ಈ ಸಂದರ್ಭದಲ್ಲಿ ವಿಧಾನ ಪರಷತ್ತಿಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸದಸ್ಯರಿಗೂ ಅಭಿನಂದನೆ ಸಲ್ಲಿಸಲಾಯಿತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ, ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆಯನ್ನು ತೀವ್ರವಾಗಿ ವಿರೋಧಿಸುವ ತೀರ್ಮಾ ಕೈಗೊಳ್ಳಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ‘ಮತಾಂತರ ಕಾಯ್ದೆ ಭಾವನಾತ್ಮಕ ವಿಷಯ.…

Girl in a jacket