Girl in a jacket

Daily Archives: December 16, 2021

ಮೇಕೆದಾಟು ಯೋಜನಾ ವರದಿ ಕೇಂದ್ರಕ್ಕೆ ಸಲ್ಲಿಕೆ:ಕಾರಜೋಳ

ಬೆಳಗಾವಿ,ಡಿ,15: ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಆರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ನಿರ್ಮಿಸಿ, 67.16 ಟಿ.ಎಂ.ಸಿ ನೀರನ್ನು ಶೇಖರಿಸಲು ರೂ.9000.00 ಕೋಟಿ ಮೊತ್ತದ ಡಿ.ಪಿ.ಆರ್ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅದು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಇಂದು ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಸದಸ್ಯರಾದ ಡಾ|| ತೇಜಸ್ವಿನಿಗೌಡ ಪ್ರಶ್ನೆಗೆ…

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿ, ಡಿ,16:ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಅವರು ಇಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದರು. ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಯವರು, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯ ವಿರುವ ಬಟ್ಟೆ/ಸೀರೆಗಳನ್ನು ನೇಕಾರರ ಸಾಮರ್ಥ್ಯಕ್ಕೆ ಅನುಗುಣವಾಗಿ ಖರೀದಿಸಲು ಪ್ರಮಾಣವನ್ನು ನಿಗದಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದರೊಂದಿಗೆ ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ…

ಕನ್ನಡ ಧ್ವಜಕ್ಕೆ ಬೆಂಕಿ; ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಡಿ,15: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್‌ ಪುಂಡರ ವಿರುದ್ಧ ಕಠಿಣವಾಗಿ ವರ್ತಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು; ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ ಎಂದಿರುವ ಅವರು. ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ…

Girl in a jacket