ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ನಿಧನ
ಬೆಂಗಳೂರು, ಡಿ,16: ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ (98) ಇಂದು (ಶುಕ್ರವಾರ)ಸಂಜೆ ಕೊನೆಯುಸಿರೆಳೆದಿದ್ದಾರೆ. ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಡಿ.10ರಂದು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಇದೇ ಫೆಬ್ರವರಿಯಲ್ಲಿ ಜಾಲಪ್ಪ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆದ್ದರಿಂದ ಸತತ ಎರಡು ಗಂಟೆಗಳ ಕಾಲ ಶಸ್ತ್ರ ಚಿಕತ್ಸೆ ಮಾಡಲಾಗಿತ್ತು. ಕರ್ನಾಟಕದ ಪ್ರಮುಖ ರಾಜಕಾರಣಿಯಾಗಿದ್ದ ಜಾಲಪ್ಪ 4 ಬಾರಿ…