Girl in a jacket

Daily Archives: December 21, 2021

ಬಸವಣ್ಣ ಭಾವಚಿತ್ರಕ್ಕೆ ಮಸಿ ಬಳಿದ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಡಿ,21;ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಬೆಳಗಾವಿ ಜಿಲ್ಲೆಯ ಆಲಿಸಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳೆದ ಎಂಇಎಸ್ ಕಾರ್ಯಕರ್ತರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ  ಪ್ರತಿಭಟನೆ ನಡೆಸಿತು. ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಎಂ ಇಎಸ್ ಪುಂಡರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಲಾಯಿತು. ಬೆಂಗಳೂರು ಜಿಲ್ಲೆ ಮತ್ತು ಬೆಂಗಳೂರು ಸಿಟಿ ಮತ್ತು ವೀರಶೈವ ಮಹಾಸಭಾ ಯುವ ಘಟಕ ಕರ್ನಾಟಕ ರಾಜ್ಯ ಯುವ ಘಟಕ…

ಜಾತಿ ನಿಂದನೆಗೆ ಕಡಿವಾಣ ಹಾಕಲು ಸರಕಾರ ಕಟ್ಟುನಿಟ್ಟಿನ ಕಾನೂನು ರೂಪಿಸಲು ಸವಿತಾ ಸಮಾಜ ಆಗ್ರಹ

ಬೆಂಗಳೂರು, ಡಿ,21: ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಸವಿತಾ ಸಮಾಜದ ಸಮುದಾಯಕ್ಕೆ ರಾಜಕೀಯ ಮತ್ತು ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಕೊಟ್ಟು ಸಮುದಾಯದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂಬ ಒತ್ತಾಯವೂ ಕೇಳಿ ಬಂತು. ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘವು…

ಎಂಇಎಸ್ ಪುಂಡರಿಂದ ಮತ್ತೇ ಉದ್ಧಟತನ

ಕಲಬುರಗಿ,ಡಿ.೨೧- ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರ ಅಟ್ಟಹಾಸ ಮುಂದುವರೆದಿದ್ದು, ಕಲ್ಯಾಣ ಕರ್ನಾಟಕದ ಸಾರಿಗೆ ಬಸ್ ತಡೆದು, ಕಪ್ಪು ಮಸಿ ಬಳಿದು ಕಿಡಿಗೇಡಿಗಳು ಮತ್ತೆ ಉದ್ಧಟತನ ಮೆರೆದಿದ್ದಾರೆ. ಮುಂಬೈನಿಂದ ಕಲಬುರಗಿಗೆ ಬರುತ್ತಿದ್ದ ಸಾರಿಗೆ ಬಸ್ ತಡೆದ ಎಂಇಎಸ್ ಕಿಡಿಗೇಡಿಗಳು, ಬಸ್ ಮೇಲೆ ಜೈ ಶಿವಾಜಿ ಎಂದು ಬರೆದಿದ್ದಾರೆ. ಬಸ್ ಮುಂಭಾಗದಲ್ಲಿ ಎಂಇಎಸ್ ಧ್ವಜ ಕಟ್ಟಿ ಬಸಗೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಚಾಲಕನ ಕೈಗೆ ಎಂಇಎಸ್ ಧ್ವಜ ನೀಡಿ ಜೈ ಶಿವಾಜಿ ಎಂದು ಘೋಷಣೆ ಕೂಗುವಂತೆ ಬಲವಂತ…

ಮತಾಂತರ ನಿಷೇಧ ಕಾಯ್ಕೆ ಸಂವಿಧಾನ ಬಾಹಿರ;ಡಿಕೆಶಿ

ಬೆಳಗಾವಿ,ಡಿ,೨೧: ಮತಾಂತರ ನಿಷೇಧ ಕಾಯ್ದೆ ಸಂವಿಧಾನ ಬಾಹಿರವಾಗಿದೆ . ಈ ಕಾಯ್ದೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದು ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಹೇಳಿದರು. ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತಾಂತರ ನಿಷೇಧ ಕಾಯ್ದೆಯನ್ನ ಮಂಡನೆ ಮಾಡಲಿದ್ದು, ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸರ್ಕಾರದವರು ರಾಜ್ಯದಲ್ಲಿ ಅಶಾಂತಿ ಮೂಡಿಸಲು ಮತಾಂತರ ನಿಷೇಧ ಕಾಯ್ದೆ ತರುತ್ತಿದ್ದಾರೆ. ಸಂವಿಧಾನದ ವಿರುದ್ಧವಾಗಿ ಇದನ್ನ ತೆಗೆದುಕೊಳ್ಳಲಾಗಿದೆ. ಸುಮ್ಮನೇ ಮಾನಸಿಕವಾಗಿ…

Girl in a jacket