ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ
ಬೆಳಗಾವಿ, ಡಿ, 22 :ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗದಲ್ಲಿ ಫ್ಲೆಕ್ಸಿಬಲ್ ಆದ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ. ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ…