ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ : ಸಿಎಂ
ಬೆಳಗಾವಿ, ಡಿ,24 :ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಬೆಳಗಾವಿ ಅಧಿವೇಶನವನ್ನು ಸಾರ್ಥಕಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಉತ್ತರ ದೊರೆತಿದೆ. ಉತ್ತರ ಕರ್ನಾಟಕದ ನೀರಾವರಿ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದೆ ಎಂದು ಸರ್ಕಾರದ ನಿರೂಪಿಸಿದೆ. ಈ ನಿಟ್ಟಿನಲ್ಲಿ. ಉತ್ತರ ಕರ್ನಾಟಕದ ಭಾಗಕ್ಕೆ ರೈಲ್ವೆ ಯೋಜನೆಗಳು, ಹೆಸ್ಕಾಂನ ಆರ್ಥಿಕ ಪುನಶ್ಚೇತನ, ಸಸಾಲಟ್ಟಿ ಮತ್ತು ಮಂಟೂರುಗಳಿಗೆ ನೀರಾವರಿ ಯೋಜನೆಗೆ ಅನುಮೋದನೆ, ಗುಲ್ಬರ್ಗಾ ಸೇಡಂ ನಲ್ಲಿ…