ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ; ಎಚ್ ಡಿಕೆ ಆಕ್ರೋಶ
ಬೆಂಗಳೂರು,ಡಿ,27:ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ, ಪರೀಕ್ಷೆಯನ್ನು ಬಹಿಷ್ಕರಿಸಿದ್ದಲ್ಲದೇ ಪ್ರತಿಭಟನೆ ನಡೆಸಿದ್ದರು. ಈ ಕುರತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ಕಿಡಿಕಾರಿದ್ದಾರೆ. ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ ಕುಮಾರಸ್ವಾಮಿ, ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ.…