ರಾಜ್ಯಾದ್ಯಂತ ವಾರಾಂತ್ಯ ಕರ್ಪ್ಯೂ ಜಾರಿ
ಬೆಂಗಳೂರು, ಜ,4: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಅನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಮೊದಲಿನಂತೆಯೇ ಮುಂದುವರಿಯುತ್ತದೆ ಎಂದಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ…