ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ
ಬೆಳಗಾವಿ,ಜ,05: ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಂದಿಳಿದಾಗ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ…