ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ಹಂಪ ನಾಗರಾಜಯ್ಯ
ಬೆಂಗಳೂರು ,ಜ,7-ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮ ಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ ಈ ರೀತಿಯ ಅದ್ದೂರಿಯ…