ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಚಿವ ಅಶ್ವತ್ಥನಾರಾಯಣ
ಬೆಂಗಳೂರು,ಜ,08: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳದಿಂದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಲಿರುವ ಪರಿಸ್ಥಿತಿಯನ್ನು ಎದುರಿಸಲು ಇರುವ ವ್ಯವಸ್ಥೆ ಮತ್ತು ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಶನಿವಾರ ಪರಾಮರ್ಶನಾ ಸಭೆ ನಡೆಸಿದರು. ನಂತರ ಕೆ.ಸಿ.ಜನರಲ್ ಆಸ್ಪತ್ರೆಗೆ ಕೂಡ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಈ ಆಸ್ಪತ್ರೆಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ತೀವ್ರ ಕೊರತೆ ಇದ್ದು, ಈ ಸಂಬಂಧ ತ್ವರಿತವಾಗಿ ಪ್ರಸ್ತಾವನೆ…