ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ
ಬೆಂಗಳೂರು. ಜ, 9:ಜನರನ್ನು ಮರುಳು ಮಾಡಲು ಕಾಂಗ್ರೆಸ್ ಪಕ್ಷ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಗೊಂಡಿದೆ. ಆದರೆ ಜನರನ್ನು ಪದೇ ಪದೇ ಮರುಳು ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ನ್ನು ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಕಿಶಿಯವರು ನೀರಾವರಿ ಸಚಿವರಾಗಿದ್ದರು, ಆಗಲೂ ಈ…