ಬಿಜೆಪಿಯಿಂದ ಮಾತ್ರ ಮೇಕೆದಾಟು ಜಾರಿ ಸಾಧ್ಯ; ಅಶ್ವತ್ಥ ನಾರಾಯಣ
ರಾಮನಗರ,ಜ,11`ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ ಗಂಡಸುತನ ಇರೋದು ಬಿಜೆಪಿಗೆ ಮಾತ್ರ; ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ. ಈ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರಿಗೆ ಈ ಪೌರುಷವಿದೆಯಾ? ಈ ವಿಚಾರದಲ್ಲಿ ನಾನು ನೇರವಾಗಿ ಅವರಿಬ್ಬರಿಗೂ ಸವಾಲೆಸೆಯುತ್ತಿದ್ದೇನೆ. ತಾಕತ್ತಿದ್ದರೆ ಅವರು ಉತ್ತರಿಸಲಿ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಂಥಾಹ್ವಾನ ನೀಡಿದ್ದಾರೆ. ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಡಿ.ಕೆ.ಶಿವಕುಮಾರ್ ಜಿಲ್ಲೆಯಿಂದ ಏಳು ಬಾರಿ ಶಾಸಕರಾಗಿ,…