ವೀಕೆಂಡ್ ಕರ್ಪ್ಯೂ ರದ್ದು; ಘೋಷಣೆ
ಬೆಂಗಳೂರು,ಜ,21: ಕೊರೋನಾ ಹೆಚ್ಚಳವಾದ ಹಿನ್ನೆಲೆ ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನ ರದ್ಧುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಘೋಷಣೆ ಮಾಡಿದ್ದಾರೆ. ಕೊರೋನಾ ನಿರ್ವಹಣೆ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಚಿವರು ತಜ್ಞರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದು ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ಈವಾರದಿಂದಲೇ ವೀಕೆಂಡ್ ಕರ್ಫ್ಯೂ…