ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ;ಎಚ್ ಡಿ ಕೆ
ರಾಮನಗರ,ಜ,28: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ಶಾಸಕರೂ ಆದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ತೀವ್ರ ಟಾಂಗ್ ನೀಡಿದರು. ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಏನನ್ನೂ ಮಾಡದ ಕಾಂಗ್ರೆಸ್ ನಾಯಕರು, ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ ಅವರು; ನಾನು ಅವರನ್ನಾಗಲಿ…