ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು, ಫೆ, 04 :ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ‘ಆರೈಕೆಯ ಅಂತರವನ್ನು ಕಡಿತಗೊಳಿಸಿ’ ಎಂಬ ಘೋಷ ವಾಕ್ಯವನ್ನು ಬಿಡುಗಡೆ ಮಾಡಿದರು. ಸುಲಭ ದರದಲ್ಲಿ ಪೆಟ್ ಸ್ಕ್ಯಾನ್ ಪರೀಕ್ಷೆ : ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ ಎರಡು ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ.…