ಅನುಧಾನ ನೀಡುವಲ್ಲಿ ತಾರತಮ್ಯ; ಸದನದಲ್ಲಿ ಹೋರಾಟಕ್ಕೆ ಕೈ ನಿರ್ಧಾರ
ಬೆಂಗಳೂರು,ಫೆ,14:ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸಿರುವ ಸರ್ಕಾರದ ಧೋರಣೆ ವಿರುದ್ಧ ತೀವ್ರ ಹೋರಾಟ ನಡೆಸಲು ಶಾಸಕಾಂಗ ಸಭೆ ತೀರ್ಮಾನಿಸಿದೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಅನುದಾನ ಬಿಡುಗಡೆ ವಿಚಾರ ಕುರಿತು ಸುದೀರ್ಘ ಸಮಾಲೋಚನೆ ನಡೆಯಿತು. ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಸೇರಿದಂತೆ ಸರ್ಕಾರದ ವಿವಿಧ ಹಗರಣಗಳ ಬಗ್ಗೆಯೂ ಸದನದಲ್ಲಿ ಚಾಟಿ ಬೀಸಲು ನಿರ್ಧರಿಸಲಾಗಿದೆ. ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ.…