ಜವಾಬ್ದಾರಿಯುತ ವಿರೋಧ ಪಕ್ಷವಾಗಿರಲು ಕಾಂಗ್ರೆಸ್ ಪಕ್ಷ ವಿಫಲ : ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು, ಫೆ,16 :ಜವಾಬ್ದಾರಿಯುತ ವಿರೋಧಪಕ್ಷವಾಗಿ ಕೆಲಸ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನದ ಮೂಲಕ ರಾಷ್ಟ್ರಧ್ವಜ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಷ್ಟ್ರಧ್ವಜವನ್ನು ಹೇಗೆ ಬಳಕೆ ಮಾಡಬೇಕು ಎನ್ನುವ ಬಗ್ಗೆ ಸಂಹಿತೆಯಿದೆ. ರಾಷ್ಟ್ರಧ್ವಜದ ವಿಷಯ ಎಲ್ಲಿಯೂ ದುರುಪಯೋಗ ಆಗಬಾರದು ಎನ್ನುವುದು ಸಂಹಿತೆಯಲ್ಲಿದೆ. ಆದರೆ ವಿರೋಧಪಕ್ಷದವರು ರಾಜಕೀಯ ಪ್ರೇರಿತವಾಗಿ ಸದನದಲ್ಲಿ ಈ ವಿಷಯವನ್ನು ದುರುಪಯೋಗ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಜನರು ಎಲ್ಲ ಬೆಳವಣಿಗೆಗಳನ್ನು…