ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರಾಗಿ ಟಿ.ಎಸ್.ಛಾಯಾಪತಿ ಆಯ್ಕೆ
ಮೈಸೂರು,ಫೆ,17: ಕನ್ನಡ ಪುಸ್ತಕ ಪ್ರಾಧಿಕಾರ ಮಾರ್ಚ್ ತಿಂಗಳಲ್ಲಿ ಹಮ್ಮಿಕೊಂಡಿರುವ ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರಾಗಿ ಟಿ.ಎಸ್.ಛಾಯಾಪತಿ ಅವರನ್ನು ಆಯ್ಕೆ ಮಾಡಲಾಗಿದೆ. ಮೈಸೂರಿನಲ್ಲಿ ಎರಡನೇ ಬಾರಿಗೆ ಪ್ರಕಾಶನ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿಯೇ ಆರು ದಿನಗಳ ಕಾಲ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಸಹ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು. ಟಿ.ಎಸ್. ಛಾಯಾಪತಿ ಅವರು ಕನ್ನಡ ಪುಸ್ತಕ ಲೋಕ ಕಂಡ ಅಪರೂಪದ ಪ್ರಕಾಶಕರಲ್ಲಿ…