ತುಂಗಾ ತಟ ಕಾಶಿ ಮಾದರಿಯಲ್ಲಿ ಅಭಿವೃದ್ಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹರಿಹರ,ಫೆ,20: ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ದೇವಸ್ಥಾನವನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿದ್ದಾರೆ. ಮುಂಚೆ ಹೋದಾಗ ದೇವಸ್ಥಾನ ಎಲ್ಲಿದೆ ಎಂದು ಹುಡುಕಬೇಕಿತ್ತು. ಇಂದು ಎಲ್ಲಾ ಘಾಟ್‍ಗಳನ್ನು ಸ್ವಚ್ಛಗೊಳಿಸಿ, ದೇವಸ್ಥಾನವನ್ನು ಭವ್ಯವಾಗಿ ಕಾಣುವಂತೆ ಮಾಡಿ ಗಂಗಾ ಆರತಿ ಮಾಡುತ್ತಿದ್ದಾರೆ. ಅದೇ ರೀತಿ ದಕ್ಷಿಣದಲ್ಲಿ ತುಂಗಭದ್ರಾ ಆರತಿ ಕಾರ್ಯಕ್ರಮ ವೈಭವವಾಗಿ ನಡೆಯಬೇಕೆಂದು ನಮ್ಮೆಲ್ಲರ ಬಯಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಶ್ರೀ ವಚನಾನಂದ ಸ್ವಾಮಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿದೆ.…