Girl in a jacket

Daily Archives: March 2, 2022

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದಿಂದ ಸಮೀಕ್ಷೆ; ಕರ್ನಾಟಕದಲ್ಲೇ ನಿಷೇಧಿತ ತಂಬಾಕು ಹೆಚ್ಚು ಬಳಕೆ

ಬೆಂಗಳೂರು,ಮಾ,02: ತಂಬಾಕು ಸೇವನೆ ಹಾಗೂ ಜಾಹಿರಾತಿಗೆ ಕಡಿವಾಣವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ತಂಬಾಕು ಸೇವನೆ ಹಾಗೂ ಮಾರಾಟದ ಬಗ್ಗೆ ರಾಜರೋಷವಾಗಿ ಜಾಹೀರಾತು ನೀಡಲಾಗುತ್ತಿದೆ ಎಂದು ನ್ಯಾಷನಲ್ ಲಾ ಸ್ಕೂಲ್ ಹಾಗೂ ಕನ್ಸೂಮರ್ ಲಾ ಆಂಡ್ ಪ್ರಾಕ್ಟೀಸಸ್ ಸಹಯೋಹದಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. 2019ರಲ್ಲಿ ಎಲೆಕ್ಟ್ರಾನಿಕ್ ನಿಕೋಟಿನ್ ಡೆಲಿವೆರಿ ಸಿಸ್ಟಮ್ಸ್ (ಇಎನ್‌ಡಿಎಸ್) ಮತ್ತು ಹೀಟೆಡ್ ತಂಬಾಕು ಪದಾರ್ಥ ಇವುಗಳ ಮೇಲೆ ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ನಿಷೇಧ ಹೇರಿದೆ. ಈ ಬಗ್ಗೆ ಎಲ್ಲಿಯೂ ಜಾಹಿರಾತು ನೀಡುವಂತಿಲ್ಲ. ಆದರೆ, ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್,…

ಕೇಂದ್ರಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ವಿದ್ಯಾರ್ಥಿ ಸಮೀಹಕ್ಕೆ ಅವಮಸನ; ಡಿಕೆಶಿ ಆಕ್ರೋಶ

ಬೆಂಗಳೂರು,ಮಾ: ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ವಿಫಲರಾದರು ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಸಂಸದೀಯ ಸಚಿವರು ವಿದ್ಯಾರ್ಥಿಗಳನ್ನ ಅವಹೇಳನ ಮಾಡಿದ್ದಾರೆ. ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ ಅಲ್ಲಿಗೆ ಹೋದ್ರು ಅಂತಾರೆ. ಪ್ರಧಾನಿಗಳು ಅದನ್ನೇ ಸಮರ್ಥಿಸಿಕೊಳ್ತಾರೆ. ಇದು ವಿದ್ಯಾರ್ಥಿ ಸಮೂಹಕ್ಕೆ ಮಾಡಿದ ಅಪಮಾನ. ಕೂಡಲೇ ಸಚಿವರು ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು. ಇಲ್ಲವಾದರೆ…

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ

ಬೆಂಗಳೂರು,ಮಾ,02: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ…

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತರಾಗಿದ್ದಾರೆ: ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ

ಬೆಂಗಳೂರು,ಮಾ,02: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಆತಂಕಕಾರಿ ವಿಷಯಗಳನ್ನು ವರದಿಯಲ್ಲಿ ಬಹಿರಂಗ ಪಡಿಸಿದೆ. ಹೌದು, ಬುಧವಾರ ವರ್ಚುವಲ್ ಮೂಲಕ “ ದಿ ವರ್ಲ್ಡ್ ಆಫ್ ಇಂಡಿಯನ್ ಗರ್ಲ್ಸ್-ವಿಂಗ್ಸ್ 2022” ಶೀರ್ಷಿಕೆಯಲ್ಲಿ ಸೇವ್ ದಿ ಚಿಲ್ಡ್ರನ್ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಕೋವಿಡ್ ಸಾಂಕ್ರಮಿಕದ ಕಾರಣ ಬಾಲಕರಿಗಿಂತ ಬಾಲಕರಿಯರೇ ಹೆಚ್ಚಾಗಿ ಶಾಲೆ ತೊರೆದಿದ್ದಾರೆ. ಕೊಳಚೆ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಶೇ.67ರಷ್ಟು ಬಾಲಕಿಯರು ಆನ್‌ಲೈನ್ ತರಗತಿಯನ್ನು…

ನೀಟ್‌ʼನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು- ಪ್ರಹ್ಲಾದ ಜೋಶಿ ಹೇಳಿಕೆಗೆ ಎಚ್ ಡಿ ಕೆ ಅತೃಪ್ತಿ

ನೀಟ್‌ʼನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು- ಪ್ರಹ್ಲಾದ ಜೋಶಿ ಹೇಳಿಕೆಗೆ ಅತೃಪ್ತಿ* *ಹೆಚ್‌ಡಿಕೆ ಹೇಳಿರುವುದೇನು? ಬೆಂಗಳೂರು,ಮಾ,02: ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ನೀಟ್‌ ಬಂದ ಮೇಲೆ ಟ್ಯೂಷನ್‌ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ…

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ವಂಡರ್‌ಲಾದಲ್ಲಿ ಮಹಿಳೆಯರಿಗೆ ಮಾತ್ರ ಪ್ರವೇಶ

ಬೆಂಗಳೂರು, ಮಾ,02:ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ವಂಡರ್‌ಲಾದಲ್ಲಿ ಮಾರ್ಚ್‌ 8 ರಂದು ಕೇವಲ ಮಹಿಳೆಯರಿಗೆ ಮಾತ್ರ ಪ್ರವೇಶವಿದ್ದು, ಒಂದು ಟಿಕೆಟ್ ಖರೀದಿಸಿದರೆ ಮತ್ತೊಬ್ಬರಿಗೆ ಉಚಿತ ಪ್ರವೇಶ ಘೋಷಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ವಂಡರ್‌ಲಾ ಆ ದಿನದಂದು ಕೇವಲ ಮಹಿಳೆಯರು ಹಾಗೂ ಯುವತಿಯರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. 10 ವರ್ಷ ಒಳಗಿನ ಗಂಡು ಮಕ್ಕಳಿಗೆ ಪ್ರವೇಶವಿದ್ದು, ಉಳಿದಂತೆ ಯಾವ ಪುರುಷರಿಗೂ ಆ ದಿನ ಪ್ರವೇಶವಿರುವುದಿಲ್ಲ. ಇದಷ್ಟೆ ಅಲ್ಲದೆ, ವಂಡರ್‌ಲಾ ರೆಸಾರ್ಟ್‌HBನಲ್ಲಿಯೂ ಸಹ ಮಹಿಳೆಯರಿಗೆ…

Girl in a jacket