ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ ನಿರ್ಣಾಯಕ: ಬೊಮ್ಮಾಯಿ
ಬೆಂಗಳೂರು,ಮಾ,07: ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ವನ್ನು ಸೋಮವಾರ ಉದ್ಘಾಟಿಸಿ, ಅವರು ಮಾತನಾಡಿದರು. ಈ ಸಮಾವೇಶವು ಬುಧವಾರದವರೆಗೆ ನಡೆಯಲಿದೆ. `ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ. ಇದು ಮುಂಬರುವ ದಿನಗಳಲ್ಲಿ…