ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡೆವು; ಸಿದ್ದರಾಮಯ್ಯ
ಬೆಂಗಳೂರು,ಮಾ,10: ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಪಂಜಾಬ್ ನಲ್ಲಿ ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡವು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಉತ್ತರಾಖಂಡ್ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಯುಪಿಯಲ್ಲಿ ನಾವು ನಿರೀಕ್ಷೆ ಮಾಡಿರಲಿಲ್ಲ. ಪಂಜಾಬ್ ನಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೆ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ…