ಮುಂಬರುವ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಸಮಾನ ಹೋರಾಟ; ದೇವೇಗೌಡ
ಬೆಂಗಳೂರು, ಮಾ, 12: “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಸಮಾನ ಹೋರಾಟ ನಡೆಸಲಿದೆ” ಎಂದು ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದರು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು, “ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನ ಆರಂಭಿಸಿದ್ದೇವೆ. ಇದೇ 20ರಂದು ನಗರದ ಅರಮನೆ ಮೈದಾನದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಅಲ್ಲಿ ನಮ್ಮ ಹೋರಾಟದ ತೀರ್ಮಾನವನ್ನು ಪ್ರಕಟಿಸುತ್ತೇವೆ” ಎಂದರು. “ಜಾತ್ಯಾತೀತ ಜನತಾದಳ ಎಲ್ಲ ಕ್ಷೇತ್ರಗಳಲ್ಲೂ…